ಅಕ್ರಮ ಮರಳುಗಾರಿಕೆ ಮೂವರ ವಿರುದ್ದ ಪ್ರಕರಣ ದಾಖಲು.

ಉಪ್ಪಿನಂಗಡಿ ಸಮೀಪದ ಪಿಲಿಕುಡೇಲು ಎಂಬಲ್ಲಿ ನೇತ್ರಾವತಿ ನದಿಯ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಎ.19ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.

ಪೊಲೀಸ್ ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು ಮರಳು ಹಾಗೂ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಪಿಎಸ್‌ಐ ಅವಿನಾಶ್ ಹೆಚ್. ಅವರು ಸಿಬ್ಬಂದಿಗಳ ಜೊತೆ ದಾಳಿ ನಡೆಸಿದ್ದು ದಾಳಿಯ ವೇಳೆ ಇಬ್ಬರು ಓಡಿ ತಪ್ಪಿಸಿಕೊಂಡಿದ್ದಾರೆ.

ಆರೋಪಿಗಳು ಯಾವುದೇ ಪರವಾನಿಗೆ ಪಡೆಯದೇ ಹೊಳೆಯಿಂದ ಮರಳನ್ನು ಕಳವು ಮಾಡುತ್ತಿದ್ದ ಬಗ್ಗೆ ಸದ್ರಿ ಆರೋಪಿಗಳ ವಿರುದ್ಧ ಹಾಗೂ ಸದ್ರಿ ಕಳವು ಮಾಡಿದ ಮರಳನ್ನು ಆನಂದ ನಾಯ್ಕ ಎಂಬವರ ಜಾಗದಲ್ಲಿ ಶೇಖರಿಸಿರುವ ಹಿನ್ನೆಲೆಯಲ್ಲಿ, ಆನಂದ ನಾಯ್ಕರವರ ವಿರುದ್ದವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಚಿತ್ರ ಕುಮಾರ್ ಮತ್ತು ಧನಂಜಯ ಎಂಬವರು ಓಡಿ ತಪ್ಪಿಸಿಕೊಂಡಿದ್ದಾರೆ

ಸ್ಥಳದಿಂದ ಕಳವು ಮಾಡಲು ಉಯೋಗಿಸಿದ ಪ್ಲಾಸ್ಟಿಕ್ ಬುಟ್ಟಿಗಳು, ಹಾರೆಗಳು ಹಾಗೂ ಕಳವು ಮಾಡಿ ರಾಶಿ ಹಾಕಿದ ಒಟ್ಟು ಸುಮಾರು 12,200 ರೂ. ಮೌಲ್ಯದ ಮರಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕಲಂ: 379 ಜೊತೆಗೆ 34 ಭಾ.ದಂ.ಸಂ.ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?