ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ

ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ (BJP) ಹೋಗುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಅಂದರು. ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು. ದಿನಾಂಕ 19ನೇ ಶಾಕಿಂಗ್ ಅಂತಾ ಹೇಳಿದ್ದರು. ಇಂದು ನಾಮಪತ್ರ ವಾಪಸ್​​ಗೆ ಕಡೆ ದಿನ. ಇಂದು ನಾನು ಕಣದಲ್ಲಿದ್ದೇನೆ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಬೆಂಬಲವಿದೆ ಎಂದಿದ್ದಾರೆ.
ನಾನು ಐದು ಬಾರಿ ಕಮಲದ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದೇನೆ. ನನಗೆ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ. ಲೋಕಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನನಗೆ ಶೇ 60 ರಷ್ಟು ಬಿಜೆಪಿ ಬೆಂಬಲ ಇದೆ ಎಂದು ಹೇಳಿದ್ದಾರೆ.
2ನೇ ಹಂತದ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಸಮಯ ಅಂತ್ಯವಾಗಿದ್ದು, ಕೊನೆಯ ದಿನವೂ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆದಿರಲಿಲ್ಲ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿ ಹಿರಿಯ ನಾಯಕರ ಮನವೊಲಿಕೆಗೂ ಜಗ್ಗಿರಲಿಲ್ಲ. ಮೋದಿ ಭಾವಚಿತ್ರ ಬಳಸಿಕೊಂಡು ಈಶ್ವರಪ್ಪ ಪ್ರಚಾರ ನಡೆಸುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ತಲೆ ನೋವಾಗಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?