ಮಂಗಳೂರು  ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್.

ಮಂಗಳೂರು  ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಮಗ್ರ ಬಂದೋಬಸ್ತ್ ತಯಾರಿ ಮಾಡಿಕೊಳ್ಳಲಾಗಿದ್ದು, ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್ ವತಿಯಿಂದ ಒಟ್ಟು 46 ಪಿಎಸ್‌ಐ ಸೆಕ್ಟ‌ರ್ ಮೊಬೈಲ್‌ಗಳು, 14 ಪಿಐ ಸೂಪರ್‌ವಿಷನ್ ಸೆಕ್ಟರ್ ಅಧಿಕಾರಿಗಳು ಹಾಗೂ 4 ಎಸಿಪಿ ನೋಡಲ್ ಅಧಿಕಾರಿಗಳನ್ನಾಗಿ ಮತ್ತು ಒಟ್ಟು ಮತಗಟ್ಟೆಗಳಿಗೆ 1003 ಪೊಲೀಸ್ ಸಿಬ್ಬಂದಿಗಳು, 350 ಗೃಹ ರಕ್ಷಕ ಸಿಬ್ಬಂದಿಗಳನ್ನು ಹಾಗೂ 17 ಫಾರೆಸ್ಟ್ ಗಾರ್ಡ್‌ ಗಳನ್ನು ಹಾಗೂ 36 ಕ್ರಿಟಿಕಲ್ ಮತಗಟ್ಟೆಗಳಿಗೆ ಕೇಂದ್ರಿಯ ಭದ್ರತಾ ಪಡೆ ಹಾಗೂ 16 ಎಎಸ್‌ಐ ಅವರನ್ನು ನಿಯೋಜಿಸಲಾಗಿರುತ್ತದೆ ಎಂದರು.

ಮತದಾನದ ದಿನದಂದು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯಕಟ್ಟಿನ ಜಾಗಗಳನ್ನು ಸೂಕ್ಷ್ಮ ಪ್ರದೇಶಗಳನ್ನಾಗಿ ಗುರುತಿಸಿ ಪಿಐ-03, ಪಿಎಸ್‌ಐ-21 ಹಾಗೂ ಎಎಸ್‌ಐ-13, ಪಿಸಿ/ಎಫ್‌ಜಿ 43 ಒಟ್ಟು 80 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?