ಕಡಬ: ತಾಳಿ ಕಟ್ಟುವ ಹೊತ್ತಲ್ಲಿ ಮದುವೆ ನಿರಾಕರಿಸಿದ ವಧು: ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು.

ತಾಳಿಕಟ್ಟುವ ಶುಭ ವೇಳೆಯಲ್ಲಿ ವಧು ವರನನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ  ಎರಡೂ ಕಡೆಯವರು ಠಾಣೆಯ ಮೆಟ್ಟಿಲೇರುವ ಪ್ರಸಂಗ ಎದುರಾಗಿದೆ.
ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆಯ ಯುವಕನ ಜೊತೆ  ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಕಂಟ್ರಮಜಲು ಎಂಬಲ್ಲಿನ ಯುವತಿ ಜೊತೆ  ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಎ.26ರಂದು ವಿವಾಹ ನಡೆದು ಬಳಿಕ ಕೋಲ್ಪೆಯ ವರನ ಮನೆಯಲ್ಲಿ ಸತ್ಕಾರ ಕೂಟದ ವ್ಯವಸ್ಥೆ ಮಾಡಲಾಗಿತ್ತು.
ಆದರೆ   ಮದುವೆ ಮಂಟಪದಲ್ಲಿಯೇ ವಿಘ್ನ ಎದುರಾಗಿದ್ದು ಧಾರಾ ಮುಹೂರ್ತದ ವೇಳೆ ತಾಳಿ ಕಟ್ಟಲು ವಧು ನಿರಾಕರಿಸಿದ ಕಾರಣ ನಡೆಯಬೇಕಿದ್ದ ಮದುವೆ ಮುರಿದುಬಿದ್ದಿದೆ. ಆದರೆ ಕೊನೇ ಕ್ಷಣದಲ್ಲಿ ಮದುವೆ ನಿರಾಕರಿಸಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ಆದರೆ ಎರಡೂ ಕಡೆಯವರು ಭಗ್ನಗೊಂಡ ಕನಸಿನೊಂದಿಗೆ ನ್ಯಾಯಕ್ಕಾಗಿ ಉಪ್ಪಿನಂಗಡಿ ಠಾಣೆಯ ಮೆಟ್ಟಿಲೇರಿದ್ದಾರೆ. 
ಮತ್ತೆ ಮದುವೆಯಾಗಲು ವರ ನಿರಾಕರಣೆ: ಪೊಲೀಸ್‌ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯಕ್ಕೆ ಪಶ್ಚಾತಾಪ ಪಟ್ಟು ಉಮೇಶ ಅವರನ್ನು ಮದುವೆ ಆಗಲು ಒಪ್ಪಿಗೆ ಸೂಚಿಸಿದರೂ ಉಮೇಶ್‌ ಅವರು ನಿರಾಕರಿಸಿದರೆಂದು ಹೇಳಲಾಗಿದೆ. ಇದರಿಂದಾಗಿ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆಸಿ ತಮ್ಮ ತಮ್ಮ ಮನೆಗಳಿಗೆ ತೆರಳಿದರು ಎಂದು ಗೊತ್ತಾಗಿದೆ.

ವರನ ಮನೆಯಲ್ಲಿ ಔತಣ ಕೂಟಕ್ಕೆ ಸಿದ್ಧತೆ: ವರ ಉಮೇಶ್ ಅವರ ಮನೆಯಲ್ಲಿ ಮದುವೆ ಔತಣ ಕೂಟಕ್ಕೆ ಮಾಂಸಾಹಾರಿ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು. ಸುಮಾರು 500 ಮಂದಿಗೆ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು. 1 ಸಾವಿರದಷ್ಟು ಐಸ್‌ ಕ್ರೀಮ್‌ ಸಹ ತರಿಸಲಾಗಿತ್ತು. ಮದುವೆ ಮುರಿದು ಬಿದ್ದಿರುವುದರಿಂದ ಇವೆಲ್ಲವೂ ಹಾಗೇ ಉಳಿದಿದೆ. ಕೊನೆ ಕ್ಷಣದಲ್ಲಿ ಯುವತಿ ಮದುವೆ ನಿರಾಕರಿಸಿದರಿಂದ ಎರಡೂ ಕಡೆಯವರಿಗೂ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?