ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಒಂದಲ್ಲ ಎರಡಲ್ಲ ಸುಮಾರು ನೂರು ವಿಡಿಯೋ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಎಸ್‌ಐಟಿ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು ನೂರು ವಿಡಿಯೋಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ” ಅಂತ ಸಿಎಂ ಟ್ವೀಟ್ ಮಾಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?