ಉಪ್ಪಿನಂಗಡಿ: ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯನ್ನು ಪ್ರಧಾನಿ ಮಾಡಿ ಎಂದು ಉಲ್ಲೇಖ: ಪ್ರಕರಣ ದಾಖಲು.

ಉಪ್ಪಿನಂಗಡಿ: ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಮುದ್ರಿಸಿರುವುದಕ್ಕೆ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ ತಾಲೂಕು ಆಲಂತಾಯ ಗ್ರಾಮದ ಶಿವಪ್ರಸಾದ್ ಯಾನೆ ರವಿ ಎಂಬಾತನ ವಿವಾಹವು ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಕೊಳಂಬೆ ಬಾಬು ಗೌಡರ ಪುತ್ರಿ ಪ್ರಮೀಳಾರೊಂದಿಗೆ ಎಪ್ರಿಲ್ 18 ರಂದು ಗೋಳಿತೊಟ್ಟು ಸಿದ್ಧಿ ವಿನಾಯಕ ಕಲಾ ಮಂದಿರದಲ್ಲಿ ಜರಗಿತ್ತು. ವಿವಾಹದ ಅಂಗವಾಗಿ ಸಿದ್ಧಪಡಿಸಲಾದ ಆಮಂತ್ರಣ ಪತ್ರವನ್ನು ಮಾರ್ಚ್1 ರಂದು ಮುದ್ರಿಸಲಾಗಿದ್ದು, ಸದ್ರಿ ಆಮಂತ್ರಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನೀವು ನಮಗೆ ನೀಡುವ ಉಡುಗೊರೆ ಎಂದು ಶಿವಪ್ರಸಾದ್ ಉಲ್ಲೇಖಿಸಿದ್ದನು.

News Editor

Learn More →

Leave a Reply

Your email address will not be published. Required fields are marked *