ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ,ಬಂಧನದ ಭೀತಿಯಲ್ಲಿ ದೇವೇಗೌಡರ ಮೊಮ್ಮಗ.

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ.

ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ರೇ ವಣ್ಣ ಅವರ ಬಂಧನದಿಂದ ಪಾರಾಗಲು ನ್ಯಾಯಾಲಯದ ಮೊರೆ ಹೋಗಿ, ಕಾನೂನಿನ ಹೋರಾಟಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯೊಬ್ಬರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದಿಂದ ದಿAದ ಪಾರಾಗಲು ಈ ಇಬ್ಬರೂ ಕಾನೂನಿನಡಿಯಲ್ಲೇ ಹೋರಾಟಕ್ಕೂ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಬಹಿರಂಗವಾಗುತ್ತಿದ್ದಂತೆಯೇ ಅದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಕೇಳಿ ಬಂದಿತು.

ವಿಡಿಯೋ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು ಎಂದು ಗುರುಮಠ್‌ಕಲ್‌ನ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಗ್ರಹಿಸಿದ್ದಾರೆ.

ಈ ಬಗ್ಗೆ ಅವರು ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಪತ್ರ ಬರೆದು ಕೆಲ ದಿನಗಳಿಂದ ರಾಜ್ಯಾದ್ಯAತ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ತುಣುಕುಗಳು ಪಕ್ಷಕ್ಕೆ ಮುಜುಗರ ತಂದಿವೆ. ಈ ವಿಡಿಯೋ ದೃಶ್ಯಗಳಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಅವರು ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ. ಹಾಗಾಗಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮನವಿ ಮಾಡುವುದಾಗಿಯೂ ಅವರು ಪತ್ರದಲ್ಲಿ ಹೇಳಿದ್ದಾರೆ.

ಈ ಎಲ್ಲ ರಾಜಕೀಯ ಬೆಳವಣಿಗೆಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ಈ ಪ್ರಕರಣದ ತನಿಖೆಗೆ ಆದೇಶಿಸಿತ್ತು. ಚುನಾವಣಾ ಹೊತ್ತಿನಲ್ಲಿ ಬಯಲಾದ ಈ ಲೈಂಗಿಕ ದೌರ್ಜನ್ಯ ಪ್ರಕರಣದ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರುಗಳಲ್ಲಿ ಮೂಡಿದೆ.

ಚುನಾವಣೆಯ ಮೇಲೆ ಈ ಪ್ರಕರಣ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರುಗಳು ಡ್ಯಾಮೆಜ್ ಕಂಟ್ರೋಲ್‌ಗೂ ಮುಂದಾಗಿ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂಬ ಮಾತುಗಳನ್ನು ಹೇಳುವ ಮೂಲಕ ಈ ಪ್ರಕರಣದಿಂದ ಅಂತರ ಕಾಯ್ದುಕೊಳ್ಳುವ ಕೆಲಸವನ್ನು ಎರಡೂ ಪಕ್ಷಗಳ ನಾಯಕರು ಮಾಡಿರುವುರಾದರೂ ಇದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಗೊತ್ತಿಲ್ಲ. ಜೆಡಿಎಸ್‌ನ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಈ ಹಗರಣ ಬಯಲಾಗುತ್ತಿದ್ದಂತೆಯೇ ಕಟುವಾಗಿ ಪ್ರತಿಕ್ರಿಯಿಸಿ, ಈ ಹಗರಣ ತಮ್ಮ ಕುಟುಂಬಕಷ್ಟೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ಮತ್ತು ತಲೆತಗ್ಗಿಸುವ ಸಂಗತಿ ಎಂದು ಹೇಳಿ, ಇದನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರಿಗೆ ಕಾನೂನಿನಂತೆ ಶಿಕ್ಷೆಯಾಗಲಿ ಎಂದು ಹೇಳುವ ಮೂಲಕ ಪಕ್ಷಕ್ಕೆ ಆಗುವ ಹಾನಿಯನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸುವ ಕೆಲಸ ಮಾಡಿದ್ದಾರೆ.

ಈ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಿರುವ ಬಿಜೆಪಿ ನಾಯಕರು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಷ್ಟೇ ದೊಡ್ಡವರಿರಲಿ ತಪುö್ಪ ಮಾಡಿದ್ದರೆ ಶಿಕ್ಷೆಯಾಗಲಿ ಎಂಬ ಮಾತುಗಳನ್ನು ಆಡಿದ್ದಾರೆ.

ಈ ಮೂಲಕ ಬಿಜೆಪಿ ಸಹ ಈ ಪ್ರಕರಣವನ್ನು ಸಮರ್ಥಿಸಲ್ಲ. ಕಾನೂನಿನನಂತೆ ಕ್ರಮ ಆಗಲಿ ಎಂಬ ನಿಲುವು ಬಿಜೆಪಿಯದ್ದು ಎಂಬ ಸಂದೇಶವನ್ನು ರವಾನಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕರುಗಳು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಟಿಯಲ್ಲೇ ಮಾತನಾಡಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಸ್‌ಐಟಿ ತನಿಖೆಯಿಂದ ಸತ್ಯ ಹೊರಬರಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದರೆ, ಮಾಜಿ ಸಚಿವ ಸಿ.ಟಿ. ರವಿ ಅವರು ಸಹ ಕಾನೂನು ಎಲ್ಲರಿಗೂ ಒಂದೇ. ಈ ಪ್ರಕರಣ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಸ್‌ಐಟಿ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ ಎಂಬ ಮಾತುಗಳನ್ನು ಆಡಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಎಲ್ಲಿಗೆ ಮುಟ್ಟತ್ತದೆ, ಯಾರಿಗೆಲ್ಲಾ ಈ ಪ್ರಕರಣ ಉರುಳಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಈ ನಡುವೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರೇವಣ್ಣ‌, ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಗಂಡನ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಇಂದು ಹಾಸನದಲ್ಲಿ ಸಂತ್ರಸ್ತೆ ಗಂಡನ ತಾಯಿ ಗೌರಮ್ಮ ಶಿಲ್ಪ ಸುದ್ದಿಗೋಷ್ಠಿ ನಡೆಸಿದ್ದು, 5 ವರ್ಷದ ಹಿಂದೆ ಸುಮ್ನೆ ಇದ್ದು ದೂರು ನೀಡಿದ್ದಾರೆ. ಭಾವನಿ ಅಮ್ಮ ನಮ್ಮ ಕುಟುಂಬಕ್ಕೆ ತುಂಬಾ ಸಹಾಯ ಮಾಡಿದ್ದಾರೆ. ಅವರು ನಮ್ಮ ಕುಟುಂಬದ ಜೊತೆ ಇದ್ದರು. ಹೆದರಿಸಿ ಇವರನ್ನ ಕಳೆದುಕೊಂಡು ಹೋಗಿ ದೂರು ಕೊಡಿಸಿದ್ದಾರೆ. ನಾವು ಶ್ರೀರಾಮಪುರದಲ್ಲಿ ಜೊತೆ ಒಟ್ಟಿಗೆ ಇದ್ವಿ. ಚುನಾವಣೆ ಸಮಯದಲ್ಲಿ ಗೌಡರ ಮನೆಗೆ ಕಪ್ಪು ಚುಕ್ಕೆ ತರಲು ಈ ಕೆಲಸ ಮಾಡಿದ್ದಾರೆ. ಇದೆಲ್ಲ ಸುಳ್ಳು ದೂರು. ರೇವಣ್ಣ ಕುಟುಂಬ ನಮಗೆ ಸಂಬಂಧಿಕರು ಎಂದು ರೇವಣ್ಣ‌ ,ಪ್ರಜ್ವಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?