ಸುಬ್ರಹ್ಮಣ್ಯ : ಸಿಡಿಲು ಬಡಿದು ನವ ವಿವಾಹಿತ ಮೃತ್ಯು

ಸುಬ್ರಹ್ಮಣ್ಯ : ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದ‌ರ್(34) ಮೃತ ಪಟ್ಟವರು. 10 ದಿನಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು. ಇವರು ಪರ್ವತ ಮುಖಿ ಸಮೀಪ ದೇವಿಕಾ ಕಾರ್ ವಾಷಿಂಗ್ ನ ಸರ್ವಿಸ್ ಸೆಂಟರ್ ನಡೆಸುತ್ತಿದ್ದರು. ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಸುರಿದಿದ್ದೆ. ಅದಕ್ಕೂ ತುಸು ಮೊದಲು ಮನೆಯಂಗಲದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಸೋಮಸುಂದರ್ ರಾಶಿ ಮಾಡುತ್ತಿದ್ದ ವೇಳೆ ಅವರಿಗೆ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ. ಎರಡು ವರ್ಷಗಳ ಹಿಂದೆ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?