ಸಿಎಂ ಮತ್ತು ಡಿಸಿಎಂ ಅವರೇ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು: ವಕೀಲ ದೇವರಾಜೇಗೌಡ.

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಿದ್ದಾರೆಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಗೌಪ್ಯ ಸಭೆ ಮಾಡಲಾಗುತ್ತಿದೆ. ಗೌಪ್ಯ ಸಭೆ ನಡೆಸಿ ಯಾರು ಯಾರನ್ನು ಆರೋಪಿಗಳನ್ನಾಗಿ ಮಾಡಬೇಕು ಅನ್ನೋದರ ಸೂಚನೆ ಕೊಟ್ಟಿದ್ದಾರೆ. ನನ್ನ ಜೀವನದ ಹೋರಾಟ ಇದ್ದಿದ್ದು ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ವಿರುದ್ಧವಾಗಿದೆ. ಅದನ್ನೇ ಅಸ್ತ್ರವಾಗಿ ಇಟ್ಟುಕೊಂಡು ಕೆಲ ಕಿಡಿಗೇಡಿ ರಾಜಕಾರಣಿಗಳು ವಾಮ ಮಾರ್ಗದಲ್ಲಿ ಹೋಗಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಚಾಲಕ ಕಾರ್ತಿಕ್ ನನ್ನ ಕಚೇರಿಗೆ ಬಂದು, ಒಂದು ಪೆನ್ ಡ್ರೈವ್ ಹಾಗೂ ‌ಕೆಲ ಡಾಕ್ಯುಮೆಂಟ್ ಕೊಡ್ತಾರೆ. ಅಶ್ಲೀಲ ವಿಡಿಯೋ ಕ್ಲೀಪ್ ಹಾಗೂ ಪತ್ರಿಕೆ ಪೇಪರ್ ಅನ್ನ ನಮ್ಮ ವಕೀಲರಿಗೆ ತಂದು ಕೊಡ್ತಾರೆ. ಇದಕ್ಕೆ ಪೂರಕವಾದ ಕೆಲ ಡಾಕ್ಯುಮೆಂಟ್ ‌ಕೊಡಿ ಅಂತ ಕೇಳಿದ್ದೇನೆ. ಕಾರ್ತಿಕ್ ‌ನನ್ನ ಮನೆಗೆ ಯಾವಾಗ ಬಂದ? ನನ್ನ ಮನೆಯಲ್ಲಿ ‌ಕುಳಿತು‌ ಮಾತನಾಡಿರುವ ವಿಡಿಯೋ ಸಿಬಿಐಗೆ ಕೊಡ್ತಾ ಇದ್ದೇನೆ ಎಂದು ವಕೀಲ ದೇವರಾಜೇಗೌಡ, ವಿಡಿಯೋ ಪ್ರದರ್ಶನ ‌ಮಾಡಿ ತೋರಿಸಿದ್ದಾರೆ.
ನ್ನು ಪೆನ್‌ಡ್ರೈವ್ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ‌ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು. ಕ್ಯಾಬಿನೆಟ್ ಮಟ್ಟದ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟಿದ್ದರು. ಮೊದಲು ನನ್ನನ್ನ ಯಾರು ಭೇಟಿ ಮಾಡಿದರು ಅನ್ನೋದನ್ನ ಅದರ ಅಡಿಯೋ ಬಿಡುಗಡೆ ಮಾಡುತ್ತಿದ್ದೇನೆ. ಇದೇ ವೇಳೆ ಎಲ್.ಆರ್. ಶಿವರಾಮೇಗೌಡ ಹಾಗೂ ದೇವರಾಜೇಗೌಡ ಅಡಿಯೋ ಸಂಭಾಷಣೆ ಮಾಡುತ್ತಿದ್ದೇನೆ. ಇಲ್ಲಿ ನೋಡಿ ಆಡಿಯೋ ಕ್ಲಿಪ್ಪಿಂಗ್ ಎಂದು ಹೇಳಿದರು. ಇದೇ ವೇಳೆ ಎಸ್‌ಐಟಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ಇದರ ತನಿಖೆಯನ್ನು ಸಿಬಿಐಗೆ ಕೊಟ್ಟರೆ, ನಾನು ಸಂಪೂರ್ಣ ಆಡಿಯೋ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ನ್ಯೂಸ್ ಫೋಕಸ್
ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ “ವಜ್ರತೇಜಸ್ ” ತಂಡದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂತ್ರಾಲಯದಿಂದ ವಾಪಸ್ಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ; 44ರ ಹರೆಯದಲ್ಲಿ ಸಾವು
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ.
1 Minute
ರಾಜ್ಯ
ಸರಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಪ್ಪಲಿ–ಶೂ–ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಗಂಭೀರ ಆಕ್ಷೇಪ- ಸಮಗ್ರ ತನಿಖೆಗೆ SDMC ಸಮನ್ವಯ ಕೇಂದ್ರ ವೇದಿಕೆ(ರಿ.) ಆಗ್ರಹ