ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ: ಕೊನೆಗೂ ಮೌನ ಮುರಿದ ಮೋದಿ.

ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷ, ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಜೆಡಿಎಸ್ ಸಂಸದನನ್ನು ದೇಶದಿಂದ ಹೊರಗೆ ಕಳುಹಿಸಿದ ನಂತರ ವೀಡಿಯೊಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬೆಳವಣಿಗೆಯು ತುಂಬಾ ಅನುಮಾನಾಸ್ಪದವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಕಿಡಿಕಾರಿದ್ದಾರೆ.

ನೀವು(ಕಾಂಗ್ರೆಸ್‌ ಸರ್ಕಾರ) ಏನನ್ನೂ ಮಾಡಲಿಲ್ಲ. ಕನಿಷ್ಠ ಪಕ್ಷ ಕೇಂದ್ರ ಸರ್ಕಾರಕ್ಕೂ ಇದರ ಬಗ್ಗೆ ಮಾಹಿತಿಯೂ ನೀಡಲಿಲ್ಲ. ಅಂದರೆ ಇದು ಪೊಲಿಟಿಕಲ್ ಗೇಮ್ ಆಗಿತ್ತು. ಅವರೊಂದಿಗೆ ಮೈತ್ರಿ ಇದ್ದ ಕಾಲದಿಂದಲೂ ಈ ವಿಡಿಯೋಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಹಾಗಂತ ನಮ್ಮ ವಿಚಾರ ಇದಲ್ಲ. ಯಾವುದೇ ಅಪರಾಧಿಗಳನ್ನು ಬಿಡಬಾರದು ಎನ್ನುವುದಷ್ಟೇ ನಮ್ಮ ಉದ್ದೇಶ. ನಮ್ಮ ದೇಶದಲ್ಲಿ ಇಂತಹ ರಾಜಕೀಯ ಆಟಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!