
ಕೇರಳದಲ್ಲಿ ಅರಿವಿಲ್ಲದೇ ಕಣಗಿಲೆ ಹೂವನ್ನು ಕಿತ್ತು ತಿಂದ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನರ್ಸ್ ಸೂರ್ಯ ಸುರೇಂದ್ರನ್ ಕೇರಳದ ಹರಿಪತ್ ಮೂಲದವರು. ಇತ್ತೀಚೆಗಷ್ಟೇ ಇಂಗ್ಲೆಂಡಿನಲ್ಲಿ ಕೆಲಸ ಸಿಕ್ಕಿದ್ದರಿಂದ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ ವಿಮಾನ ನಿಲ್ದಾಣಕ್ಕೆ ಹೋಗಲು ಪ್ರಯಾಣ ಬೆಳೆಸಿದ್ದರು. ಆದರೆ ಪ್ರಯಾಣಕ್ಕೂ ಮುನ್ನ ಸೆಲ್ ಫೋನ್ ನಲ್ಲಿ ಮಾತನಾಡುತ್ತಾ ಗಿಡದಲ್ಲಿದ್ದ ಕಣಗಿಲೆ ಹೂವನ್ನು ಅರಿವಿಲ್ಲದೆ ಕುಡಿದು ತಿಂದಿದ್ದಾರೆ ಎನ್ನಲಾಗಿದೆ.

ಇನ್ನು, ಮನೆಯಿಂದ ಕೇರಳದ ನೆಡುಂಬಚೇರಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅವರಿಗೆ ಅಲಪ್ಪುಳದಲ್ಲಿ ವಾಕರಿಕೆ ಮತ್ತು ವಾಂತಿ ಆಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆತಂದು ಕುಟುಂಬಸ್ಥರು ಚಿಕಿತ್ಸೆ ಕೊಡಿಸಿ ಮನೆಗೆ ವಾಪಸ್ ಕರೆತಂದಿದ್ದಾರೆ. ಆದರೆ ಮನೆಗೆ ಆಗಮಿಸುತ್ತಿದ್ದಂತೆ ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪರುಮಲೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.



