ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದಲ್ಲಿ ಪತ್ತೆ.

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.

ಪೊಲೀಸರು ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರಕಿರಲಿಲ್ಲ. ಮೇ 9ರಂದು ಪಾಂಡೇಶ್ವರ ಠಾಣೆಗೆ ವಿದ್ಯಾರ್ಥಿನಿ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಇದ್ದಾಳೆ ಎಂಬ ಮಾಹಿತಿ ದೊರಕಿತ್ತು. ಅಲ್ಲಿ ತೆರಳಿದ ಪೊಲೀಸರು ಆಕೆಯನ್ನು ಮಂಗಳೂರಿಗೆ ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಎಂಎಸ್ಸಿ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗಿತ್ತು. ತೀವ್ರ ಒತ್ತಡದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿ ತೆರಳಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ತೆರಳುವ ಬಸ್ಸನ್ನು ಹತ್ತಿದ್ದಳು. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಫ್ರೀ ಇರುವುದರಿಂದ ನೇರವಾಗಿ ಚಿಕ್ಕಮಗಳೂರು ತೆರಳಿದ್ದು, ಅಲ್ಲಿಂದ ಮೈಸೂರಿಗೆ ಹೋಗುವ ಬಸ್ ಹತ್ತಿದ್ದಾಳೆ. ಅಲ್ಲಿಂದ ಮತ್ತೆ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್ ನಿಲ್ದಾಣದಲ್ಲಿ ನಿಂತುಕೊಂಡಿದ್ದಳು.

ಅಲ್ಲಿದ್ದಾಗಲೇ ತಮಿಳು ಮಾತನಾಡುವ ಹುಡುಗಿಯೊಬ್ಬಳು ಪರಿಚಯ ಆಗಿದ್ದು, ಆಕೆಯ ಜೊತೆಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ. ಸುಳ್ಯದ ಅರಂತೋಡಿನಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದಳು. ದೀಪಿಕಾಗೆ ತಮಿಳು ಬಿಟ್ಟರೆ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ. ಮೂಲತಃ ತಮಿಳುನಾಡಿನವರಾಗಿದ್ದು, ತಂದೆ, ತಾಯಿ ಮಂಗಳೂರಿನಲ್ಲಿ ನೆಲೆಸಿದ್ದರಿಂದ ಇಲ್ಲಿಯೇ ಓದು ಪೂರೈಸಿದ್ದಳು. ಸುಳ್ಯದಲ್ಲಿ ಹುಡುಗಿ ಇರುವ ಬಗ್ಗೆ ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸ್ ಸಿಬಂದಿ ಒಬ್ಬರಿಗೆ ತಿಳಿಸಿದ್ದರು. ಅದರಂತೆ, ಪಾಂಡೇಶ್ವರ ಠಾಣೆ ಪೊಲೀಸರು ತೆರಳಿ ಆಕೆಯನ್ನು ಮಂಗಳೂರಿಗೆ ಕರೆತಂದಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!