POK ಯಲ್ಲಿ ಪಾಕ್ ಸೇನೆಯ ಮೇಲೆ ಸ್ಥಳೀಯರ ದಾಳಿ, ಮೊದಲ ಸಲ ಹಾರಿದ ಭಾರತ ಧ್ವಜ, ಭುಗಿಲೆದ್ದು ಹಿಂಸಾಚಾರ.

ಪಾಕ್ ಆಕ್ರಮಿತ ಕಾಶ್ಮೀರವನ್ನು ಸದ್ಯದಲ್ಲೇ ಭಾರತಕ್ಕೆ ಸೇರ್ಪಡೆ ಮಾಡುತ್ತೇವೆ, ಅದು ಎಂದಿಗೂ ಭಾರತದ ಅವಿಭಾಜ್ಯ ಅಂಗ ಎಂದು ರಕ್ಷಣಾ ಸಚಿವರು, ಕೇಂದ್ರ ಗೃಹ ಸಚಿವರು ಇತ್ತೀಚೆಗಷ್ಟೆ ಹೇಳಿದ್ದರು. ಈ ಬೆನ್ನಲ್ಲೇ ಇದೀಗ POK ಯಲ್ಲಿ ಮಹತ್ವದ ಬೆಳವಣಿಗೆ ಒಂದು ನಡೆದಿದೆ.
ಕೆಲ ದಿನಗಳ ಹಿಂದೆ ರಾಜನಾಥ್ ಸಿಂಗ್(Rajanath Singh) ಪಾಕ್ ಆಕ್ರಮಿತ ಕಾಶ್ಮೀರ ತಾನಾಗೆ ಭಾರತದೊಂದಿಗೆ ವಿಲೀನ ಆಗುತ್ತದೆ ಎಂದು ಹೇಳಿದ್ದರು. ಅವರು ಹೇಳಿದಂತೆ ಇದೀಗ ಪಿಒಕೆ ತಾನಾಗೆ ಭಾರತದೊಂದಿಗೆ ವಿಲೀನಗೊಳ್ಳುವ ಲಕ್ಷಣಗಳು ಗೋಚರಿಸಿದೆ. ಯಾಕೆಂದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಸ್ಥಳೀಯರು ಪಾಕಿಸ್ತಾನ ಸೇನೆ ಮೇಲೆ ದಾಳಿ ಮಾಡಿದ್ದಾರೆ. ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ.
ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಡ, ವಿದ್ಯುತ್ ಕಡಿತ ಸೇರಿದಂತೆ ಹಲವು ಸಮಸ್ಯೆಗಳಿಂದ ಹೈರಾಣಾಗಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಜನ, ಪಾಕಿಸ್ತಾನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ ವೈರಲ್ ಆಗಿದ್ದು, ಪಾಕಿಸ್ತಾನದ ಆತಂಕ ಹೆಚ್ಚಾಗಿದೆ. ಎಲ್ಲೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ
ಇತ್ತೀಚಗಷ್ಟೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಭಾಗ, ತನಾಗಿಯೇ ಭಾರತದ ಜೊತೆ ಪಿಒಕೆ ವಿಲೀನಗೊಳ್ಳಲಿದೆ ಎಂದಿದ್ದರು. ಇತ್ತ ಕೇಂದ್ರ ಗೃಹ ಸಿಚವ ಅಮಿತ್ ಶಾ ಕೂಡ ಪಿಒಕೆ ನಮ್ಮದು, ಅದು ಎಂದಿಗೂ ನಮ್ಮದಾಗಬೇಕು. ಸದ್ಯದಲ್ಲೆ ನಮಗೆ ಸೇರುತ್ತದೆ ಎಂದು ಪುನರುಚ್ಚರಿಸಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?