ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪನೇಣು ಬಿಗಿದು ವಿವಾಹಿತನ ಆತ್ಮಹತ್ಯೆ.

.ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ
ನೇಣು ಬಿಗಿದು ವಿವಾಹಿತನ ಆತ್ಮಹತ್ಯೆ.

ಪುತ್ತೂರು : ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ನಡೆದಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲು ನಿವಾಸಿ ನಾರಾಯಣ ಮುಖಾರಿ ಅವರ ಪುತ್ರ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನೊಬ್ಬನಿದ್ದು, ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಮೃತರ ಪತ್ನಿ ಶೋಭಾ ಅವರು ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *