ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಅಪಾಯದಿಂದ ಪಾರು.

ಬಂಟ್ವಾಳ: ಭಾರೀ ಮಳೆಯ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಅಪಾಯದಿಂದ ಪಾರಾದ ಕಾರು ಚಾಲಕ ತೌಶೀಫ್ ಎಂದು ಗುರುತಿಸಲಾಗಿದೆ.

ತೌಶೀಫ್ ಅವರು ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದು, ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ. ಕಾರು ಚಾಲಕ ತೌಶೀಫ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಭಾನುವಾರ ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ ಹರಿದು ಹೋಗದೆ ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ಮಾಡಿದ್ದಾರೆ‌. ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಂತ ಪರಿಣಾಮ ಅಪಘಾತ ಸಂಭವಿಸುತ್ತಿದೆ ಎಂಬ ಆರೋಪವನ್ನು ವಾಹನ ಸವಾರರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ

News Editor

Learn More →

Leave a Reply

Your email address will not be published. Required fields are marked *