ಬಾಂಗ್ಲಾದೇಶದ ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್.


ಬಂಧಿತ ಶಂಕಿತರನ್ನು ಬಹರ್ ಮಿಯಾ (30) ಮತ್ತು ರಾಸೆಲ್ ಮಿಯಾ (40) ಎಂದು ಗುರುತಿಸಲಾಗಿದೆ.

ಬಂಧಿತರು ನಿಷೇಧಿತ ಅಲ್ ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಅನ್ಸರುಲ್ಲಾ ಬಾಂಗ್ಲಾ ತಂಡ (ಎಬಿಟಿ)ಗೆ ಸೇರಿದವರು. ಅವರು ಭಾರತದಲ್ಲಿ ನಿಷೇಧಿತ ಅಲ್ ಖೈದಾದೊಂದಿಗೆ (ಎಕ್ಯೂಐಎಸ್) ಸಂಪರ್ಕ ಹೊಂದಿದ್ದು, ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸುವ ಸಲುವಾಗಿ ಬಾಂಗ್ಲಾ ದೇಶದಿಂದ ಗುವಾಹಟಿಗೆ ಬಂದು ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಪಾಸ್‍ಪೋರ್ಟ್ ಇಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದಾರೆ. ಅಲ್ಲದೇ ಅಸ್ಸಾಂನಲ್ಲಿ ಭಯೋತ್ಪಾದನಾ ಜಾಲವನ್ನು ಹರಡಲು ಭಾರತೀಯ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ನಕಲಿ ಎಂದು ಶಂಕಿಸಲಾದ ಆಧಾರ್ ಮತ್ತು ಪಾನ್ ಕಾರ್ಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌

News Editor

Learn More →

Leave a Reply

Your email address will not be published. Required fields are marked *