ವಿಧಾನ ಪರಿಷತ್ ಕೈ ತಪ್ಪಿದ ಟಿಕೆಟ್: BJP ವಿರುದ್ಧವೇ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ.

ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ

ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ ಬಿಜೆಪಿಯಲ್ಲೇ ಇರುತ್ತೇನೆ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ಇದು ಯಾವುದೇ ಬಂಡಾಯ ಅಥವಾ ಪಕ್ಷ, ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ ಎಂದು ಭಟ್ ಹೇಳಿದ್ದಾರೆ

News Editor

Learn More →

Leave a Reply

Your email address will not be published. Required fields are marked *