ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ಹಾಗೂ ನಾಲ್ವರು ಆರೋಪಿಗಳನ್ನು  ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ  ಪೊಲೀಸರು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ

ಬಿಜೈ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಬಂಡ್ಸಾಲೆ ಅಡ್ಡೂರು ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರ್ ಬಾವಾ ಮಹಲ್ ನಿವಾಸಿ ಮೊಹಮ್ಮದ್ ನೌಮಾನ್(22), ಉಳ್ಳಾಲದ ಬೋಳಿಯಾರ್ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತ ಆರೋಪಿಗಳು.6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಆಗಬಹುದು. ಈ ಬಗ್ಗೆ  ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ  ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು 2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?