ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ.

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್‌, ರಫೀಕ್‌ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಈರ್ವರಿಗೂ ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *