ಬಂಟ್ವಾಳ : ಅಕ್ರಮ ಮರಳು ಸಾಗಾಟದ ಎರಡು ಟಿಪ್ಪರ್ ಪೊಲೀಸ್ ವಶ : ಚಾಲಕರು ಪರಾರಿ.

ಬಂಟ್ವಾಳ : ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಲಾರಿ ನಿಲ್ಲಿಸಿ ಚಾಲಕರಿಬ್ಬರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ದಿನಾಂಕ: 04.06.2024 ರಂದು ಬೆಳಿಗ್ಗಿನ ಜಾವ ಪಾಣೆಮಂಗಳೂರಿನಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು, ಹಾಗೂ ಸಿಬ್ಬಂದಿಗಳು, ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ KA-21-C-4213 ಹಾಗೂ KA-19-AA-8752 ನೇ ನೊಂದಣಿ ಸಂಖ್ಯೆಯ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚನೆ ನೀಡಿದಾಗ, ಸದ್ರಿ ಟಿಪ್ಪರ್ ಲಾರಿಗಳನ್ನು ಅದರ ಚಾಲಕರು ರಸ್ತೆಯಲ್ಲಿ ನಿಲ್ಲಿಸಿ ಓಡಿ ಪರಾರಿಯಾಗಿದ್ದಾರೆ. ಬಳಿಕ ಸದ್ರಿ ಟಿಪ್ಪರ್ ಲಾರಿಗಳನ್ನು ಪರಿಶೀಲಿಸಿದಾಗ, ಅವುಗಳಲ್ಲಿ ಮರಳು ಲೋಡ್ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಟಿಪ್ಪರ್ ಲಾರಿ ಚಾಲಕರು ಯಾವುದೇ ಪರವಾನಿಗೆಯನ್ನು ಪಡೆಯದೇ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದುದು ಕಂಡುಬಂದ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿಅ.ಕ್ರ:- 96/2024, ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!