ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು.

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು

ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ.

ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೇಸ್‍ನ ಆಯನೂರು ಮಂಜುನಾಥ್ , ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿ ಇದ್ದರು.

ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯ ವರೆಗೆ ಐದುವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು.
ಕಾಂಗ್ರೇಸ್‍ನ ಆಯನೂರು ಮಂಜುನಾಥ್ 13516 , ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 7039, ಎಸ್ ಪಿ ದಿನೇಶ್ 2518 ಮತಗಳನ್ನು ಪಡೆದರು.

ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆಗೆ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ.

ಒಟ್ಟು 66497 ಮತಗಳು ಚಲಾವಣೆಯಾಗಿದ್ದು ಅದರಲ್ಲಿ 61382 ಮತಗಳು ಅಂಗೀಕೃತವಾಗಿತ್ತು. ಮಿಕ್ಕ ಮತಗಳು ತಿರಸ್ಕತವಾಗಿದ್ದವು.

ಭರ್ಜರಿ ಗೆಲುವು ಕಂಡ ಡಾ.ಧನಂಜಯ ಸರ್ಜಿಯವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಮುಖಂಡರು ಸಹಿತ ಕಾರ್ಯಕರ್ತರು ಮೈಸೂರಿನ ಮತಎಣಿಕೆ ಕೇಂದ್ರದಲ್ಲಿ ಅಭಿನಂದಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!