ಉಳ್ಳಾಲ: ದರೋಡೆಗೆ ಸಂಚು ರೂಪಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಸಿಸಿಬಿ ಬಲೆಗೆ.

ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿ  ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಗಳನ್ನು  ಮುಕ್ಕಚ್ಚೇರಿಯ ಸಮೀರ್ ಅಲಿ ಯಾನೆ ಕಡಪರ ಸಮೀರ್(33), ಬೋಳಿಯಾರ್‌ನ ಮನ್ಸೂರ್ ಯಾನೆ ಬೋಳಿಯಾರು ಮನ್ಸೂರು(30), ಕೋಣಾಜೆ ಮಲಾರ್‌ನ ನೌಷಾದ್(30) ಎಂದು ಗುರುತಿಸಲಾಗಿದೆ.

ಈ ಮೂವರು ಬಂಧಿತ ಆರೋಪಿಗಳಿಂದ ತಲವಾರು, ಚೂರಿ, ಮೊಬೈಲ್ ಫೋನುಗಳು ಹಾಗೂ ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 25.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *