ಹಿರಿಯ ಸ್ವಾಮೀಜಿಯ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಆಪ್ತ ಸಹಾಯಕ.

ಮೈಸೂರು : ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಯವರನ್ನು ಆಪ್ತ ಸಹಾಯಕ ರವಿ (60) ಎಂಬಾತ ಸೋಮವಾರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರವಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ ಎಂದು ತಿಳಿದಿದೆ.

ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳಾಗಿದ್ದವು.ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *