ಲ್ಯಾಂಡ್ ಬೀಟ್ ಮೊಬೈಲ್ ಆ್ಯಪ್ : ಸರಕಾರಿ ಭೂಮಿ ಒತ್ತುವರಿ ತಡೆಯಲು ಬಂದಿದೆ ಆ್ಯಪ್- ದೇಶದಲ್ಲೇ ಪ್ರಥಮ ಬಾರಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದ ರಾಜ್ಯ ಸರಕಾರ.

” ಸರ್ಕಾರಿ ಜಾಗಗಳ ಅತಿಕ್ರಮಣ / ಒತ್ತುವರಿಯನ್ನು ತಡೆಯಲು ದೇಶದಲ್ಲೇ ಪ್ರಥಮ ಬಾರಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಮತ್ತು ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಆರ್ಟಿಸಿಯಲ್ಲಿ ಜಮೀನು ಮಾಲೀಕರ ಭಾವಚಿತ್ರ ಜೊತೆಗೆ ಆಧಾರ್ ಜೋಡಣೆ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ

ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳ ಒತ್ತುವರಿಗೆ ಅವಕಾಶ ಇರುವುದಿಲ್ಲ



ಈ ಹಿಂದೆ ಆಡಳಿತ ನಡೆಸಿದ ಹಲವು ಸರ್ಕಾರಗಳು ಸರ್ಕಾರಿ ಜಾಗ ಸಂರಕ್ಷಣೆಗಾಗಿ ಪ್ರಯತ್ನಿಸಿವೆ. ಆದರೆ ನಿರೀಕ್ಷಿತ ಫಲಿತಾಂಶ ಅದರಿಂದ ಸಿಕ್ಕಿಲ್ಲ. ಹೀಗಾಗಿ ಈಗಿನ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಜಾಗ ಒತ್ತುವರಿ ತಡೆಯಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಇದರಲ್ಲಿ ಪ್ರಮುಖವಾದದ್ದು ಲ್ಯಾಂಡ್ ಬೀಟ್ ವ್ಯವಸ್ಥೆ . ಆರು ತಿಂಗಳ ಹಿಂದೆ ಲ್ಯಾಂಡ್ ಬೀಟ್ ಆ್ಯಪ್ ಸಿದ್ಧಪಡಿಸಿ ಕಾರ್ಯರೂಪಕ್ಕೆ ತರಲಾಗಿದೆ. ಮೂರು ತಿಂಗಳ ಹಿಂದೆ ಈ ಯೋಜನೆ ಅನುಷ್ಠಾನಕ್ಕೆ ಬಂದಿದ್ದು, ಪೂರ್ಣ ಗೊಂಡ ಬಳಿಕ ಸರ್ಕಾರಿ ಜಾಗದ ವಿವರ, ಒತ್ತುವರಿ ಮಾಹಿತಿ ಬೆರಳ ತುದಿಯಲ್ಲೇ ಸಿಗಲಿದೆ” ಕಂದಾಯ ಸಚಿವ ಕೃಷ್ಣ ಬೈರೆ ಗೌಡ ತಿಳಿಸಿದ್ದಾರೆ

ಈ ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋ ಫೆನ್ಸಿಂಗ್ ಮಾಡುತ್ತಾರೆ. ಈ ಆ್ಯಪ್ ಮೂಲಕ ಜಿಯೋ ಫೆನ್ಸಿಂಗ್ ಮಾಡಿ, ಒತ್ತುವರಿ ಮಾಡಿದ್ದಲ್ಲಿ ಅಂತಹ ಆಸ್ತಿಗಳ ವಿವರ ಲಭ್ಯವಾಗುತ್ತದೆ. ಈ ಸ್ಥಳಗಳಿಗೆ ನಿಗದಿತ ಅವಧಿಯಲ್ಲಿ ಭೇಟಿ ನೀಡಲು ಯಾವ ರೀತಿ ಪೊಲೀಸ್ ಬೀಟಿಂಗ್ ವ್ಯವಸ್ಥೆ ಇರುತ್ತದೆ. ಅದೇ ರೀತಿ ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಬೀಟಿಂಗ್ ವ್ಯವಸ್ಥೆಯನ್ನು ಆ್ಯಪ್ನಲ್ಲಿ ಕಲ್ಪಿಸಲಾಗಿದೆ

ಲ್ಯಾಂಡ್ ಬೀಟ್ ಮತ್ತು ಆಧಾರ್ ಜೋಡಣೆ ಮಾರ್ಚ್ ತಿಂಗಳಿಂದ ಪ್ರಾರಂಭವಾಗಿದ್ದು, ಈಗಾಗಲೇ 14 ಲಕ್ಷ ಸರ್ಕಾರಿ ಜಾಗವನ್ನು ಆ್ಯಪ್ನಲ್ಲಿ ಲೋಡ್ ಮಾಡಲಾಗಿದೆ. ಮತ್ತು 1.40 ಕೋಟಿ ಆರ್ಟಿಸಿಗಳಿಗೆ ಆಧಾರ್ ಜೋಡಣೆಯಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಮಹಜರು ನಡೆಸಿ, ಒತ್ತುವರಿಯಾಗಿದ್ದರೆ ಅವುಗಳ ವಿವರಗಳನ್ನು ಆ್ಯಪ್ನಲ್ಲಿ ಹಂಚಿಕೊಳ್ಳಲಿದ್ದಾರೆ. ಇದರ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಲಿದ್ದಾರೆ. ಸದ್ಯ ರಾಜ್ಯಾದ್ಯಂತ 5.90 ಲಕ್ಷ ಸ್ಥಳಗಳನ್ನು ಮಹಜರು ಮಾಡಲಾಗಿದೆ. ಸರ್ಕಾರಿ ಜಾಗಗಳ ಮಹಜರು ಪ್ರತಿ ಮೂರು ತಿಂಗಳಿಗೊಮ್ಮೆ ಪುನರಾವರ್ತಿತವಾಗಲಿದೆ. ಇದರಿಂದ ಒತ್ತುವರಿ, ಅತಿಕ್ರಮಣ ತಡೆಯಬಹುದಾಗಿದೆ ಎನ್ನುತ್ತಾರೆ ಕಂದಾಯ ಸಚಿವರು.

RTCಗೆ ಆಧಾರ್ ಲಿಂಕ್
RTCಗೆ ಆಧಾರ್ ಲಿಂಕ್, ರಾಜ್ಯದಲ್ಲಿ 4.30 ಕೋಟಿ ಜಮೀನು ಮಾಲೀಕರಿದ್ದಾರೆ. ಇತ್ತೀಚೆಗೆ ಯಾರದ್ದೋ ಜಮೀನನ್ನು ಮತ್ಯಾರೋ ನೋಂದಣಿ ಮಾಡಿಸಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. RTC ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಮಾಲೀಕತ್ವಕ್ಕೆ ಖಾತ್ರಿ ಕೊಟ್ಟಂತಾಗುತ್ತದೆ. ಜೊತೆಗೆ ಖಾತೆ, ಪಹಣಿ ವಿತರಣೆಯೂ ಸರಳೀಕರಣವಾಗಲಿದೆ. RTC- ಆಧಾರ ಜೋಡಣೆಯಿಂದ ಪವತಿ ಖಾತೆ ಆಗದಿರುವ ಆಸ್ತಿಗಳ ಕುರಿತು ಸಹ ಮಾಹಿತಿ ಸಿಗಲಿದೆ. ಇದರಿಂದ ಆಡಳಿತ ಸರಳೀಕರಣಗೊಂಡು, ವೇಗವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ.

“RTC ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಒಬ್ಬರ ಜಮೀನನ್ನು ಮತ್ತೊಬ್ಬರು ಲಪಟಾಯಿಸಲು ಆಗುವುದಿಲ್ಲ. ಆಧಾರ್ ಸಂಖ್ಯೆ ಜೋಡಣೆ ಅಭಿಯಾನವನ್ನು ಮಾರ್ಚ್ ತಿಂಗಳಿಂದಲೇ ಆರಂಭಿಸಲಾಗಿದೆ. ಸದ್ಯ 1.40 ಕೋಟಿ ಆಸ್ತಿಗಳು ಲಿಂಕ್ ಆಗಿವೆ. ಇನ್ನು ಮುರ್ನಾಲ್ಕು ತಿಂಗಳಲ್ಲಿ ಎಲ್ಲ ಆಸ್ತಿಗಳ ಜೋಡಣೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಕಂದಾಯ ಸಚಿವರು ತಿಳಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?