ಮಂಗಳೂರು : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನ ಕೋಡ್ ಸಂಖ್ಯೆ ಬಳಸಿ ಹಣದ ಬೆದರಿಕೆ ಕರೆ.

ಮಂಗಳೂರು : ಮಂಗಳೂರು ನಗರ ಮತ್ತು ಸುರತ್ಕಲ್ ಬಡಾವಣೆಯ ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ಕರೆ ಮಾಡಿ ಹಣದ ಬೆದರಿಕೆ ಕರೆ ಮಾಡಿರುವ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ವಿವರ ನೀಡಿದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜೂನ್ 11 ಮತ್ತು 12 ರಂದು ಅಪರಿಚಿತರು ಪೊಲೀಸ್ ಅಧಿಕಾರಿಗಳಂತೆ ನಟಿಸಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದು ಕೆಲವರನ್ನು ಬಂಧಿಸಲಾಗಿದೆ ಎಂದು ಹೇಳಿ ತಮ್ಮ ಮಕ್ಕಳನ್ನು ಬಿಡುಗಡೆ ಮಾಡಲು ಹಣಕ್ಕಾಗಿ ಒತ್ತಾಯಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆಗಳನ್ನು ಸಂಪರ್ಕಿಸಿದಾಗ, ಅವರು ತಮ್ಮ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಕರೆಗಳನ್ನು ಮಾಡಿದ ದೂರವಾಣಿ ಸಂಖ್ಯೆಗಳನ್ನು ಪರಿಶೀಲಿಸಿದಾಗ, ಅವು ಪಾಕಿಸ್ತಾನ ಮತ್ತು ಪೋಲೆಂಡ್‌ನ ಐಎಸ್‌ಡಿ ಕೋಡ್‌ಗಳಿಗೆ ಸೇರಿದವು ಎಂದು ಕಂಡುಬಂದಿದೆ.

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ.

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ.

ಬುಧವಾರ ಮತ್ತಿಬ್ಬರು ಪೋಷಕರಿಗೆ ಇದೇ ರೀತಿ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಒಬ್ಬ ಪೋಷಕರಿಗೆ ತಮ್ಮ ಮಗನ ವಿರುದ್ಧ ಮಾದಕವಸ್ತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಲಾಯಿತು ಮತ್ತು ಅವನ ಬಿಡುಗಡೆಗೆ ಹಣದ ಬೇಡಿಕೆಯಿತ್ತು. ಮತ್ತೊಬ್ಬ ಪೋಷಕರಿಗೆ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು ಮತ್ತು ಅವಳನ್ನು ಬಿಡುಗಡೆ ಮಾಡಲು ಸುಲಿಗೆಗೆ ಒತ್ತಾಯಿಸಲಾಯಿತು. ಆದರೆ ಎರಡೂ ಪ್ರಕರಣಗಳಲ್ಲಿ ಪೋಷಕರು ಕಾಲೇಜುಗಳಿಗೆ ಕರೆ ಮಾಡಿ ತಮ್ಮ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಫೆಡೆಕ್ಸ್ ಇಂಟರ್​ನ್ಯಾಷನಲ್ ಕೊರಿಯರ್ ಹೆಸರಿನಲ್ಲಿ ನಕಲಿ ಕರೆ ಮಾಡಿದ ವಂಚಕರ ಮೋಸದ ಬಲೆಗೆ ಬಿದ್ದು ಹಲವು ಮಂದಿ ಹಣ ಕಳೆದುಕೊಂಡ ಘಟನೆಗಳು ಮಂಗಳೂರು ಸುತ್ತಮುತ್ತ ಇತ್ತೀಚೆಗೆ ವರದಿಯಾಗಿದ್ದವು. ಇದೀಗ ಹೊಸ ವಿಧಾನದ ಮೂಲಕ ಸೈಬರ್ ವಂಚಕರು ಜನರನ್ನು ಮೋಸಗೊಳಿಸಿ ಹಣ ಎಗರಿಸುತ್ತಿದ್ದಾರೆ.ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?