ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್.

ಚಿಕ್ಕಮಗಳೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಯತ್ನಿಸಿದ್ದ ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಬಿಲ್ ಕಲೆಕ್ಟರ್ ಪ್ರದೀಪ್ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಸದಾಶಿವಮೂರ್ತಿ ಮಗ ರಾಕೇಶ್ ನೀಡಿದ ದೂರಿನ ಮೇರೆಗೆ ಶನಿವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಅನಿಲ್‌ ರಾಥೋಡ್ ಹಾಗೂ ಮಲ್ಲಿಕಾರ್ಜುನ ನೇತೃತ್ವದ ತಂಡ ಪ್ರದೀಪ್ ನನ್ನು ನಗರಸಭೆ ಕಚೇರಿ ಎದುರು ಬಂಧಿಸಿದ್ದಾರೆ. ಫೋನ್ ಪೇ ಮೂಲಕ ರಾಕೇಶ್ ಮೊಬೈಲ್ ನಿಂದ ಮೊದಲಿಗೆ 3000 ಹಾಕಿಸಿಕೊಂಡಿದ್ದ ಪ್ರದೀಪ್, ಬಳಿಕ ನಗದು 2 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಅದನ್ನು ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ, ಕಾರ್ಯಾಚರಣೆ ತಂಡದಲ್ಲಿ ಲೋಕಾಯುಕ್ತ ಪೊಲೀಸರಾದ ಅನಿಲ್ ನಾಯಕ್ ಲೋಕೇಶ್, ವಿಜಯಭಾಸ್ಕರ್, ಶ್ರೀಧ‌ರ್ ಪ್ರಸಾದ್ ಚಂದನ್ ಭಾಗಿಯಾಗಿದ್ದರು.

News Editor

Learn More →

Leave a Reply

Your email address will not be published. Required fields are marked *