ಬೆಳ್ತಂಗಡಿ: ಇಸ್ಪೇಟ್‌ ಅಡ್ಡೆಗೆ ಪೊಲೀಸ್‌ ದಾಳಿ: ಆರೋಪಿಗಳು ಸಹಿತ ನಗದು ಹಾಗೂ ಇನ್ನಿತರ ವಸ್ತುಗಳು ಪೊಲೀಸ್ ವಶ.

ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿಯ ಸುದೆಮುಗೇರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಚಂದ್ರಶೇಖರ್ ಎ. ಎಮ್, ಪೊಲೀಸ್ ಉಪ ನಿರೀಕ್ಷಕರು ಹಾಗೂ ಬೆಳ್ತಂಗಡಿ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ 11,730/- ಹಾಗೂ ಇತರ ಸೊತ್ತುಗಳು ಪತ್ತೆಯಾಗಿದೆ. ಆರೋಪಿಗಳನ್ನು ಬೆಳ್ತಂಗಡಿ ಕಸಬಾ ಗ್ರಾಮ ನಿವಾಸಿ ಗಣೇಶ್ (62), ಕೊಯ್ಯೂರು ಗ್ರಾಮ, ಬೆಳ್ತಂಗಡಿ ತಾಲೂಕು ದಿನೇಶ ಕೆ (42), ಲಾಯಿಲ ಗ್ರಾಮ ಬೆಳ್ತಂಗಡಿ ಅಜಯ್ (31), ನಡ ಗ್ರಾಮ ಬೆಳ್ತಂಗಡಿ ರವಿ ಪ್ರಕಾಶ (52), ಲಾಯಿಲ ಗ್ರಾಮ ಬೆಳ್ತಂಗಡಿ ಸುಬ್ರಮಣ್ಯ (34) , ಬೆಳ್ತಂಗಡಿ ಕಸಬಾ ಗ್ರಾಮ ಗಂಗಾಧರ್, ಲಾಯಿಲ ಗ್ರಾಮ ಸುಬ್ರಮಣ್ಯ ಎಂದು ಗುರುತಿಸಲಾಗಿದೆ.

ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ : 68/2024 ಕಲಂ: 87 ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?