ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ.

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಹತ್ಯೆಯಾದ ಸ್ವಾಮೀಜಿ. ಘಟನೆ ಸಂಬಂಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್‌ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಮಾಲೂರಿನ ಸಂತಳ್ಳಿ ಗೇಟ್​ ಬಳಿಯ ಆಶ್ರಮದಲ್ಲಿ ಸ್ನಾನ ಮಾಡುತ್ತಿದ್ದ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಹೊರಗೆ ಎಳೆದುಕೊಂಡು ಬಂದ ಆರೋಪಿಗಳು ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಆಶ್ರಮ ಹಾಗೂ ಆಸ್ಪತ್ರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು.

ಆಶ್ರಮಕ್ಕೆ ಸೇರಿದ ಪಾಲಿಟೆಕ್ನಿಕಲ್‌ ಕಾಲೇಜು ಸಂಬಂಧ ಚಿನ್ಮಯಾನಂದ ಮತ್ತು ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ, ಅರುಣ್ ಕುಮಾರ್‌ ಗುಂಪುಗಳ ನಡುವೆ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಇದೇ ವಿಚಾರವಾಗಿ ಹಿಂದೆಯೂ ಎರಡು ಗುಂಪುಗಳ ನಡುವೆ ಹಲವು ಬಾರಿ ಗಲಾಟೆ ನಡೆದಿತ್ತು. ಈ ಸಂಬಂಧ ಪೊಲೀಸ್​ ಠಾಣೆಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ಸಹ ದಾಖಲಾಗಿವೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?