ಮಂಗಳೂರು:ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮಂಗಳೂರು, ಜೂ‌. 27: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.



News Editor

Learn More →

Leave a Reply

Your email address will not be published. Required fields are marked *