ಮಂಗಳೂರು : ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು.

ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.


ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.

ಮಂಗಳೂರು

ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ

ಅಫಘಾತದ ತೀವ್ರತೆಗೆ ಬೆಂಜ್ ಕಾರು ಪೀಸ್ ಪೀಸ್

ಉದ್ಯಮಿ ಪುತ್ರ ಚಲಾಯಿಸುತ್ತಿದ್ದ ಕಾರು

ನಿಯಂತ್ರಣಕ್ಕೆ ಸಿಗದೇ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು

ಉಜಿರೆಯ ಉದ್ಯಮಿ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್

ಅತೀ ವೇಗದ ಚಾಲನೆಯಿಂದ ನಡೆದ ಅಫಘಾತ

ಇಂದು ಮುಂಜಾನೆ ನಡೆದ ಘಟನೆ

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?