
ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು.
ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಸಂಸದರು,ದೆಹಲಿಯಲ್ಲಿದ್ದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಭಾರ ಅಧ್ಯಕ್ಷರು ಹೇಮಂತ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ, ಜಿಲ್ಲೆಯ ಹಾಗೂ ಮಂಡಲದ ಮುಖಂಡರು ಅಧಿಕಾರಿಗಳು ಮತ್ತು ಪಾರ್ಟಿಯ ಪ್ರಮುಖರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು..
ಸಂತ್ರಸ್ತರಿಗೆ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದರು ಹಾಗೂ ಗ್ರಾಮವಾರು ಸರ್ವೇಕ್ಷಣೆ ನಡೆಸಿ ಅಪಾಯಕಾರಿ ಸ್ಥಳಗಳಲ್ಲಿ ವಾಸಿಸುತ್ತಿರುವ ಮನೆಗಳನ್ನು ಗುರುತಿಸುವಂತೆ ತಹಶಿಲ್ದಾರರಿಗೆ ಸೂಚಿಸಲಾಗಿದೆ..


