ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ.

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ ನಡೆಸಲಾಗಿದೆ.

 ಉಳ್ಳಾಲ ಠಾಣಾ ವ್ಯಾಪ್ತಿಯ ಕೇಸ್ ನಲ್ಲಿ ವಿಚಾರಣಾಧೀನ ಖೈದಿಗಳ ಮೇಲೆ ಜೈಲಿನಲ್ಲಿ ಟೋಪಿ ನೌಫಲ್ ಮತ್ತು ಗ್ಯಾಂಗ್ ನಿಂದ ದಾಳಿಮಾಡಿದ ಘಟನೆ ವರದಿಯಾಗಿದೆ.

ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡ ವಿಚಾರಣಾಧೀನ ಖೈದಿಗಳು. ಸಂಜೆ 6:30 ರಿಂದ 6:45 ರ ನಡುವೆ ವಿಚಾರಣಾಧೀನ ಖೈದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಘಟನೆಯಾ ಬಗ್ಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಬಗ್ಗೆ ಕಮಿಷನರ್ ಮಾಹಿತಿನೀಡಿದ್ದಾರೆ .

ಆರೋಪಿಗಳು ಮತ್ತು ಹಲ್ಲೆಗೊಳಗಾದ ಇಬ್ಬರೂ ಅನೇಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹಲ್ಲೆನಡೆಸಿದ್ದಾರೆ. ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಗಿದ್ದು ಇಬ್ಬರೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ಹಲ್ಲೆ ನಡೆಸಿದ ಆರೋಪಿಗಳೆಂದು ತಿಳಿದುಬಂದಿದೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

News Editor

Learn More →

Leave a Reply

Your email address will not be published. Required fields are marked *