ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ನಿರ್ಬಂಧ.

ಮಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿ ಇಲ್ಲಿಯವರೆಗೆ ಹಲವು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಕೆಲವೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ. ಅತ್ತ ಉಡುಪಿ ಜಿಲ್ಲೆಯಲ್ಲಿಯೂ ಮಳೆ ಅವಾಂತರ ಸೃಷ್ಟಿಸಿದೆ.

ಇದೀಗ ಜಿಲ್ಲಾಡಳಿತ ಬೆಳ್ತಂಗಡಿ ತಾಲೂಕಿನ ನರಸಿಂಹಗಢ – ಗಡಾಯಿಕಲ್ಲು ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?