
ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.
ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.
ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.


