ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.

ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.

ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.
ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು.

ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ರಶೀದ್ ನನ್ನು ಕರೆದುಕೊಂಡು ಬಂದಿದ್ದರು ಎನ್ನಲಾಗಿದೆ. ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?