ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು.

ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ

ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡ‌ರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅರ್ದ ಗಂಟೆ ಕಳೆದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆ ಬಳಿಕವೇ ಮೃತದೇಹ ಬದಿಗೆ ಸರಿಸಲಾಯಿತು. ಅಷ್ಟರವರೆಗೂ ಮೃತದೇಹ ಅಪಘಾತ ನಡೆದ ಸ್ಥಳದಲ್ಲೇ ಇತ್ತು. ವಾಹನ ಸಂಚಾರಕ್ಕೆ ತೊಡಕಾಗಿತ್ತು.

ಪುತ್ತೂರಿನ ಸಂಚಾರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕೇಸು ದಾಖಲಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?