ಪತಿಯಿಂದ ಪತ್ನಿಗೆ ಚೂರಿ ಇರಿತ.

ಪುತ್ತೂರು : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ.
ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (೪೦) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ಹಕೀಂ ಮತ್ತು ಸಜರಾ ಅವರ ವಿವಾಹ ೧೫ ವರ್ಷಗಳ ಹಿಂದೆ ನಡೆದಿತ್ತು. ವಿವಾಹವಾದ ಕೆಲ ವರ್ಷಗಳ ಬಳಿಕ ಹಕೀಂ ಸಜರಾ ಅವರಿಗೆ ಚಿತ್ರಹಿಂಸೆ ನೀಡಲು ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಸಜರಾ ಅವರು ಕಳೆದ ಮೂರು ವರ್ಷಗಳಿಂದ ಜೋರುಕಟ್ಟೆಯಲ್ಲಿರುವ ತನ್ನ ತವರು ಮನೆಗೆ ಬಂದು ಮಕ್ಕಳೊಂದಿಗೆ ನೆಲಸಿದ್ದರು. ಶುಕ್ರವಾರ ಮಧ್ಯಾಹ್ನ ವೇಳೆ ಚೂರಿ ಹಿಡಿದುಕೊಂಡು ಬಂದಿದ್ದ ಹಕೀಂ ಏಕಾಏಕಿಯಾಗಿ ಸಜರಾ ಅವರ ಮೇಲೆ ಹಲ್ಲೆ ನಡೆಸಿ, ತಡೆಯಲು ಬಂದ ತಂದೆ ಮಹಮ್ಮದ್ ಅವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

ಹಲ್ಲೆ ನಡೆಸಿ ಪರಾರಿಯಾದ ಹಕೀಂನನ್ನು ಮನೆಮಂದಿ ಹಾಗೂ ಹೆತ್ತವರು ಸೇರಿಕೊಂಡು ಬೆನ್ನಟ್ಟಿ ಪಿಲಿಗೂಡು ಎಂಬಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಉಪ್ಪಿನಂಗಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕೈ, ಹೊಟ್ಟೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿರುವ ಸಜರಾ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?