ಮಂಗಳೂರು ; ರಾಜ್ಯಪಾಲರ ನಡೆ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ,ಬಸ್ಸಿಗೆ ಕಲ್ಲು ತೂರಾಟ.

ಮಂಗಳೂರು ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರ ಪ್ಯಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದ್ದು ಬಸ್ಸಿಗೆ ಕಲ್ಲು ತೂರಾಟ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶಹೊರಹಾಕಿದ್ದಾರೆ.

ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥ ಆರಂಭವಾಗಿದ್ದು ಮಂಗಳೂರು ನಗರ ಸೇರಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾರ್ಯಕರ್ತರು ಭಾಗಿಯಾಗಿದ್ದರು. ಸಾವಿರಾರು ಸಂಖ್ಯೆಯಲ್ಲಿ ನಾರಾಯಣ ಗುರು ಸರ್ಕಲ್ ಬಳಿ ಕಾರ್ಯಕರ್ತರು ಜಮಾಯಿಸಿದ್ದು ಎಂಎಲ್ ಸಿ ಐವನ್ ಡಿಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು.

News Editor

Learn More →

Leave a Reply

Your email address will not be published. Required fields are marked *