ಹೆಚ್ಚುವರಿ ಚಾಲಕ/ ನಿರ್ವಾಹಕರನ್ನು ನೇಮಿಸಿಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಹೆಚ್ಚುವರಿ ಚಾಲಕ/ ನಿರ್ವಾಹಕರನ್ನು ನೇಮಿಸಿ
ಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಪುತ್ತೂರುಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ/ ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ/ ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂ‌ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ ಯವರು ಮನವಿ ಸಲ್ಲಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು‌ಭೇಟಿಯಾದ ಶಾಸಕರು ಪುತ್ತೂರು ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಬಸ್ ಸಂಚಾರ ಹೆಚ್ಚುವರಿಯಾಗಿ ವ್ಯವಸ್ಥೆ ಮಾಡುವಲ್ಲಿ ಚಾಲಕ/ ನಿರ್ವಾಹಕರ ಕೊರತೆ ಇದೆ. ಬಸ್ ಇದ್ದರೂ ಚಾಲಕರ ಕೊರತೆಯಿಂದ ಗ್ರಾಮೀಣ ಭಾಗಕ್ಕೆ ಬಸ್ ಓಡಾಟ ನಡೆಸಲು ಅಸಾಧ್ಯವಾಗಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಹೆಚ್ಚುವರಿಯಾಗಿ ಚಾಲಕ/ ನಿರ್ವಾಹಕರನ್ನು ನೇಮಿಸುವಂತೆ ಸಚಿವರಲ್ಲಿ‌ಮನವಿ ಸಲ್ಲಿಸಿದ್ದಾರೆ.

ಅಂತರರಾಜ್ಯ ಬಸ್ ಸಂಚಾರಕ್ಕೆ ಮನವಿ
ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಪುತ್ತೂರಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ ಮಾಡಲು ಇಲಾಖೆಯಿಂದ ಅನುಮತಿ‌ನೀಡುವಂತೆಯೂ ಸಚಿವರಲ್ಲಿ‌ಮನವಿ‌ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಗ್ಯಾರಂಟಿ‌ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಡಿ, ಪಕ್ಷದ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು, ರೋಶನ್ ರೈ ಬನ್ನೂರು, ಪ್ರಮೋದ್ ಕೆ ಎಸ್ ಕೊಳ್ತಿಗೆ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?