ಮರವಂತೆ ಅಂಚೆ ಕಛೇರಿ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಗಂಗೊಳ್ಳಿ ಪೊಲೀಸರು.

ಕುಂದಾಪುರ: ಮರವಂತೆ ಅಂಚೆ ಕಛೇರಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಸೆ.3ರಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಭಟ್ಕಳದ ಫೌಜಾನ್ ಅಹಮ್ಮದ್(19) ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆಗಸ್ಟ್ ತಿಂಗಳ 17-19 ರ ನಡುವೆ ಪೋಸ್ಟ್ ಆಫೀಸ್ ಬಾಗಿಲು ಮುರಿದು ಒಳಭಾಗದಲ್ಲಿ ಕಪಾಟುಗಳನ್ನು ಅಸ್ತವ್ಯಸ್ತ ಮಾಡಲಾಗಿತ್ತು. ಈ ಬಗ್ಗೆ ಪೋಸ್ಟ್ ಮಾಸ್ಟರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು‌. ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಸೈಗಳಾದ ಹರೀಶ್ ಆರ್. ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ, ದಿನೇಶ್ ತಂಡ ಸಿ.ಸಿ ಟಿ.ವಿ. ಪೂಟೇಜ್‌ನ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

News Editor

Learn More →

Leave a Reply

Your email address will not be published. Required fields are marked *