ನೆಲ್ಲಿಕಟ್ಟೆ ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.

ನೆಲ್ಲಿಕಟ್ಟೆ ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಅಸಹಾಯಕರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ನೆಲ್ಲಿಕಟ್ಟೆ ಮಿತ್ರ ಮಂಡಳ ಪುತ್ತೂರು ವತಿಯಿಂದ ಒಡಿಯೂರು ಶ್ರೀ ವಜ್ರಮಾತ ಮಹಿಳಾ ಘಟಕ ಪುತ್ತೂರು ಹಾಗೂ ಗುರುದೇವ ಸೇವಾ ಬಳಗ ಪುತ್ತೂರು ಇದರ ಸಹಕಾರದೊಂದಿಗೆ ವರ್ಷಂ ಪ್ರತಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನೆಲ್ಲಿಕಟ್ಟೆ ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೆಲ್ಲಿಕಟ್ಟೆ ಮಿತ್ರ ಮಂಡಳ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಾಂತಿ ಹೆಗ್ಡೆ, ರೊಟೇರಿಯನ್ ಉಲ್ಲಾಸ್ ಪೈ ಪುಟಾಣಿ ಮಕ್ಕಳೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಅಸಹಾಯಕ ಸೇವಾ ಟ್ರಸ್ಟ್ ಹಾಗೂ ವಜ್ರಮಾತ ಅಧ್ಯಕ್ಷರಾದ ಶ್ರೀಮತಿ ನಯನ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಜ್ರಮಾತ ಕಾರ್ಯದರ್ಶಿ ಶಾರದ ಕೇಶವ್ ವಂದಿಸಿದರು. ವಜ್ರಮಾತ ಕೋಶಾಧಿಕಾರಿ ಯಮುನ, ಸುಮಂಗಲ ಶೆಣೈ, ಪುಷ್ಪ, ಪದ್ಮ ಶೆಟ್ಟಿ ಹಾಗೂ ಅಂಗನವಾಡಿ ಶಿಕ್ಷಕ ವೃಂದದವರು ಸಹಕರಿಸಿದರು. ಪುಟಾಣಿ ಮಕ್ಕಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?