ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಹೈಕೋರ್ಟ್​ ಅನುಮತಿ 

ಬೆಂಗಳೂರು : ಮುಡಾ ಸೈಟ್‌ಗಳ ಅಕ್ರಮ ವರ್ಗಾವಣೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಆರ್​​ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಸ್ವೀಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್​ಗೆ ಅನುಮತಿಸಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್​​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್​ ತೀರ್ಪ ಅನ್ನು ಇವತ್ತಿಗೆ ಕಾಯ್ದಿರಿಸಿತ್ತು. ಅದರಂತೆ ಹೈಕೋರ್ಟ್​​ ಸಿಎಂ ಸಿದ್ದರಾಮಯ್ಯರ ಅರ್ಜಿಯನ್ನು ವಜಾ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‌ಗೆ ಹಾಜರಾಗುವಂತೆ ರಾಜ್ಯಪಾಲರು ನೋಟೀಸ್ ನೀಡದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮುಡಾ ಹಗರಣದ ಅರ್ಜಿ ವಿಚಾರಣೆಯನ್ನೂ ಕೈಗೆತ್ತಿಕೊಂಡಿತ್ತು. ಆದರೆ, ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯ ಆದೇಶ ಹೊರಬೀಳುವವರೆಗೂ ಕೆಳ ಹಂತದ ಯಾವುದೇ ನ್ಯಾಯಾಲಯಗಳು (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ತೀರ್ಪು ಅಥವಾ ಆದೇಶ ನೀಡದಂತೆ ಹೈಕೋರ್ಟ್‌ನಿಂದ ತಡೆ ಒಡ್ಡಲಾಗಿತ್ತು. ಇದೀಗ ಆದೇಶ ಹೊರ ಬಿದ್ದ ಬೆನ್ನಲ್ಲಿಯೇ ಕೆಳ ಹಂತದ ಕೋರ್ಟ್‌ಗಳಲ್ಲಿ ಪ್ರಾಸಿಕ್ಯೂಷನ್ ವಿಚಾರಣೆ ನಡೆಯಲಿದೆ. ಇದೀಗ ಸಿಎಂ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲಿಯೇ ಮುಡಾ ಹಗರಣದ ತನಿಖೆ ಮುಮದುವರೆಯಲಿದೆ.ಸದ್ಯ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರರಕಣದ ಬಗ್ಗೆ ತನಿಖೆಯಾಗಬೇಕು ಎಂದು ಕೋರ್ಟ್ ಹೇಳಿದ್ದರಿಂದ ಸಿಎಂಗೆ ಇನ್ನಷ್ಟು ಸಂಕಷ್ಟ ಹೆಚ್ಚಾದಂತಾಗಿದೆ.

News Editor

Learn More →

Leave a Reply

Your email address will not be published. Required fields are marked *