ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು_ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ.

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು_ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ.

ಪುತ್ತೂರು :ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ ಆಗಿದೆ ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಮಾಧ್ಯಮಕ್ಕೆ ತಿಳಿಸಿದರು.

ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.

ಹಿಂದುಳಿದ ವರ್ಗದ ಹೆಸರು ಹೇಳಿಕೊಂಡು ರಕ್ಷಣೆ ಪಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರು ಈ ಪ್ರಕರಣದಿಂದ ಹಿಂದುಳಿದ ವರ್ಗ ತಲೆತಗ್ಗಿಸುವಂತಾಗಿದೆ.

ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಒತ್ತಾಯಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?