ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ.

ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ
ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕನಕರಾಜು ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?