ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಯದ್ವಾ ತದ್ವಾ ಮಗುಚಿ ಬಿದ್ದ ಘಟನೆ ಇಂದು ಕೆಮ್ಮಾರ ಎಂಬಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಯದ್ವಾ ತದ್ವಾ ಮಗುಚಿ ಬಿದ್ದ ಘಟನೆ ಇಂದು ಕೆಮ್ಮಾರ ಎಂಬಲ್ಲಿ ನಡೆದಿದೆ.

ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಕೂಡಿಕೊಂಡು ಮೇಲೆಕ್ಕೆತ್ತಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್‌ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಈ ರಾಜ್ಯ ಹೆದ್ದಾರಿಯು ಹಳೆಗೇಟು- ಕೊಯಿಲದವರೆಗೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ-ಗುಂಡಿಹಳಿಂದ ಕೂಡಿದೆ. ಹಲವು ಬಾರಿ ಈ ಬಗ್ಗೆ ಮನವಿ ಮಾಡಿದರೂ ಲೋಕೋಪಯೋಗಿ ಇಲಾಖೆ ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ವ್ಯಕ್ತವಾಗಿದೆ.

News Editor

Learn More →

Leave a Reply

Your email address will not be published. Required fields are marked *