
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ರಾಜು ಪೂಜಾರಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕ್ಷೇತ್ರವು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿಯು ಕಿಶೋರ್ ಕುಮಾರ್ ಬೊಟ್ಯಾಡಿಯವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು ನಾಮಪತ್ರ ಸಲ್ಲಿಕೆಗೆ ನಾಳೆ (ಅ. 3) ಕೊನೆ ದಿನವಾಗಿದೆ.


