ಮೂಲ್ಕಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಎರಡನೇ ಹಂತದ ಕಾಮಗಾರಿಗೆ ಚಾಲನೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ರಾಷ್ಟ್ರೀಯ ಹೆದ್ದಾರಿ ಮೂಲ್ಕಿ ಇಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನದ ಕಾಮಗಾರಿಯ ಕುರಿತು ಇಂದು(ದಿನಾಂಕ 03-10-2024) ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿಯ ಶ್ರೀ ಪ್ರವೀಣ್ ಭೋಜ ಶೆಟ್ಟಿ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಸಭೆಯು ನಡೆಯಿತು.


ಅಕಾಲಿಕ ಮಳೆಯ ಕಾರಣದಿಂದಾಗಿ ಕಾಮಗಾರಿಯು ನಿಧಾನಗತಿಯಲ್ಲಿ ಸಾಗಿದ್ದು ಈಗ ಎರಡನೇ ಹಂತದ ಕಾಮಗಾರಿಯನ್ನು ಆದಷ್ಟು ತ್ವರಿತಗತಿಯಲ್ಲಿ ಮಾಡಿ ಮುಗಿಸುವರೇ ನವರಾತ್ರಿಯ ಪ್ರಾರಂಭ ದಿನದ ಈ ಶುಭದಿನದಂದು ಚಾಲನೆ ನೀಡಿ ಮುಂದಿನ ಕಾಮಗಾರಿಯ ಕುರಿತು ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿ, ಇಂಜಿನಿಯರ್ ಶ್ರೀ ಜೀವನ್ ಕೆ. ಶೆಟ್ಟಿ ಮೂಲ್ಕಿ,ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ ಇವರುಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *