ಪುತ್ತೂರು ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

ಪುತ್ತೂರು ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ ಅವರು ದೀಪ ಬೆಳಗಿ ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.


ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?