ಬೆಂಗಳೂರಿನ ಜಿಗಣಿ : ಪೊಲೀಸರ ಮಿಂಚಿನ ಕಾರ್ಯಾಚರಣೆ ಪಾಕ್ ಪ್ರಜೆಗಳು ಭಾರತಕ್ಕೆ ಬರಲು ಸಹಾಯ ಮಾಡಿದ ಪ್ರಮುಖ ಆರೋಪಿ ಅರೆಸ್ಟ್.

ಪಾಕ್ ಪ್ರಜೆಗಳ ಬಂಧನ ಪ್ರಕರಣದ ಪ್ರಮುಖ ರೂವಾರಿ ಪರ್ವೇಜ್‌ನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಪರ್ವೇಜ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಪರ್ವೇಜ್‌ ಜಿಗಣಿ ಪೊಲೀಸರ ವಶದಲ್ಲಿ ಇದ್ದಾನೆ.

ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಬರಲು ಪರ್ವೇಜ್ ಪ್ರಮುಖ ಕಾರಣವಾಗಿದ್ದು, ಈತನೇ ಭಾರತೀಯ ದಾಖಲೆಗಳನ್ನು ಕೂಡ ಎಲ್ಲಾ ಪಾಕಿಸ್ತಾನಿ ಪ್ರಜೆಗಳಿಗೆ ಮಾಡಿಕೊಟ್ಟಿದ್ದ. ಜೊತೆಗೆ ಯೂನಸ್ ಆಲ್ಗೋರ್ ಧರ್ಮ ಗುರುಗಳ ಪ್ರವಚನಗಳ ಪ್ರಚಾರಕ. ಬಂಧಿತ ಪ್ರಜೆಗಳೆಲ್ಲರೂ ಸಹ ಇವನ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದ್ದು, ಇವನ ಸೂಚನೆಯಂತೆ ಧರ್ಮ ಗುರುಗಳ ಪ್ರವಚನವನ್ನು ಪಾಕ್ ಪ್ರಜೆಗಳು ಭಾರತದಲ್ಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸದ್ಯ ಜಿಗಣಿ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಇನ್ನಷ್ಟು ಅಂಶಗಳು ಹೊರಬರಬೇಕಿದೆ

News Editor

Learn More →

Leave a Reply

Your email address will not be published. Required fields are marked *