ಕಾರ್ಕಳ : ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾದ ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು : ಆರೋಪಿಗಾಗಿ ಶೋಧ.

ಕಾರ್ಕಳ : ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾದ ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು : ಆರೋಪಿಗಾಗಿ ಶೋಧ
ಕಾರ್ಕಳ : ಕಾರ್ಕಳ ತಾಲೂಕಿನ ಬೈಪಾಸ್‌ ರಸ್ತೆಯಲ್ಲಿರುವ ಎಂಆರ್‌ಪಿಎಲ್‌ ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಕಾರನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. 

ಸೆಪ್ಟೆಂಬರ್ 29ರಂದು ಬೆಳಗ್ಗಿನ ಜಾವ 2.30ರ ವೇಳೆಗೆ ಕಾರಿಗೆ 4,253.88 ರೂ.ಮೌಲ್ಯದ ಪೆಟ್ರೋಲ್‌ ಹಾಕಿಸಿಕೊಂಡ ಆರೋಪಿ, ಬಳಿಕ ಪೆಟ್ರೋಲ್‌ ಬಂಕ್‌ ಸಿಬಂದಿ ಆಕಾಶ್‌ ಎಂಬವರಲ್ಲಿ ಸ್ಕ್ಯಾನರ್‌ ತರುವಂತೆ ಹೇಳಿದ್ದ. ಆಕಾಶ್‌ ಸ್ಕ್ಯಾನರ್‌ ತರಲು ಹೋಗಿದ್ದಾಗ ಆರೋಪಿಯು ಕಾರಿನೊಂದಿಗೆ ಪರಾರಿಯಾಗಿದ್ದ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿ.ಸಿ ಕ್ಯಾಮರಾದಲ್ಲಿ ದಾಖಲಾಗಿದ್ದ ದೃಶ್ಯಾವಳಿ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಯು ಕುಕ್ಕುಂದೂರು-ಗಣಿತನಗರ ಮಾರ್ಗವಾಗಿ ಹೋಗಿರುವುದು ತಿಳಿಯಿತು. ಆರೋಪಿ ಬಂಟಕಲ್ಲು ನಿವಾಸಿಗಾಗಿ ಶೋಧ ನಡೆಯುತ್ತಿದೆ.

ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?